ಜಾಬ್ಸ್ ನಿರೀಕ್ಷೆಯಲ್ಲಿದ್ದೀರಾ! ಹಾಗಾದರೆ ಈ ಸುದ್ದಿ ನಿಮಗಾಗಿ, `KEA JOBS 2025’ – ‘ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ವಾಯುವ್ಯ ಕರ್ನಾಟಕ ಸಾರಿಗೆ ಸಂಸ್ಥೆಯಲ್ಲಿ ಸಹಾಯಕ ಸಂಚಾರ ವ್ಯವಸ್ಥಾಪಕ’ ಹುದ್ದೆಗಳ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ಕರ್ನಾಟಕದಲ್ಲಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಈ ಸುಸಂಧಿಯನ್ನು ಉಪಯೋಗಿಸಿಕೊಳ್ಳಬಹುದು. ಕರ್ನಾಟಕ ಪರೀಕ್ಷಾ ಪ್ರಾಧಿಕಾರ ದಿಂದ ಸಹಾಯಕ ಸಂಚಾರ ವ್ಯವಸ್ಥಾಪಕ ನೇಮಕಾತಿ ಪ್ರಕಟಣೆ ಪ್ರಕಾರ, ಅರ್ಹತೆ ಇರುವ ಅರ್ಭ್ಯಥಿಗಳು ಕೊನೆಯ ದಿನಾಂಕ 10-ಡಿಸೆಂಬರ್-2025 ರೊಳಗಾಗಿ ನಿಗದಿಪಡಿಸಿದ ಅಧಿಕೃತ ವೆಬ್ ಸೈಟ್ ಆದ https://cetonline.karnataka.gov.in/kea ಮೂಲಕ ಆನ್ ಲೈನ್‌ನ ಮೂಲಕ ಮಾತ್ರ ಅರ್ಜಿಯನ್ನು ಸಲ್ಲಿಬೇಕಾಗುತ್ತದೆ.
KEA JOBS 2025 ಉದ್ಯೋಗ ಮಾಹಿತಿ
ವಾಯುವ್ಯ ಕರ್ನಾಟಕ ಸಾರಿಗೆ ಸಂಸ್ಥೆಯಲ್ಲಿ ಸಹಾಯಕ ಸಂಚಾರ ವ್ಯವಸ್ಥಾಪಕ ಹುದ್ದೆಗಳ ನೇಮಕಾತಿ ಅಧಿಕೃತ ನೇಮಕಾತಿ ಪ್ರಕಟಣೆ 2025ರ ಪ್ರಕಾರ, ನೇಮಕಾತಿ ಅಡಿಯಲ್ಲಿ ವಿವಿಧ ಹುದ್ದೆಗಳಿಗೆ ಒಟ್ಟು 26 ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತಿ ಹೊಂದಿರುವ ಆರ್ಭ್ಯಥಿಗಳಿಂದ ಅರ್ಜಿಗಳನ್ನು ಕರೆಯಲಾಗಿದೆ. ಅರ್ಜಿ ಸಲ್ಲಿಸುವ ಆರ್ಭ್ಯಥಿಗಳು ಪದವಿ, ಸ್ನಾತಕೋತ್ತರ ಪದವಿ ಇನ್ನೂ ಮುಂತಾದ ವಿದ್ಯಾರ್ಹತೆಯನ್ನು ಹೊಂದಿರಬೇಕು. ನೇಮಕಾತಿ ಹೋರಾಡಿಸಲಾದ ಹುದ್ದೆಗಳ ಬಗ್ಗೆ ಹೆಚ್ಚಿನ ವಿವಿರಗಳನ್ನು ಈ ಕೆಳಗೆ ವಿಸ್ತಾರವಾಗಿ ವಿವರಿಸಲಾಗಿದೆ.
ಖಾಲಿ ಇರುವ ಹುದ್ದೆಯ ಹೆಸರು ಮತ್ತು ಹುದ್ದೆಗಳ ಸಂಖ್ಯೆ:
| ಹುದ್ದೆಯ ಹೆಸರು | ಹುದ್ದೆಗಳ ಸಂಖ್ಯೆ |
| ಸಹಾಯಕ ಆಡಳಿತಾಧಿಕಾರಿ | 02 ಹುದ್ದೆಗಳು |
| ಸಹಾಯಕ ಲೆಕ್ಕಾಧಿಕಾರಿ | 02 ಹುದ್ದೆಗಳು |
| ಸಹಾಯಕ ಕಾನೂನು ಅಧಿಕಾರಿ | 04 ಹುದ್ದೆಗಳು |
| ಸಹಾಯಕ ಕಾರ್ಮಿಕ ಮತ್ತು ಕಲ್ಯಾಣ ಅಧಿಕಾರಿ | 04 ಹುದ್ದೆಗಳು |
| ಸಹಾಯಕ ತಾಂತ್ರಿಕ ಶಿಲ್ಪಿ | 06 ಹುದ್ದೆಗಳು |
| ಸಹಾಯಕ ಸಂಚಾರ ವ್ಯವಸ್ಥಾಪಕ | 08 ಹುದ್ದೆಗಳು |
| ಒಟ್ಟು | 26 ಹುದ್ದೆಗಳು |
ವೇತನದ ವಿವರಗಳು:
ವಾಯುವ್ಯ ಕರ್ನಾಟಕ ಸಾರಿಗೆ ಸಂಸ್ಥೆಯಲ್ಲಿ ಸಹಾಯಕ ಸಂಚಾರ ವ್ಯವಸ್ಥಾಪಕ ಹುದ್ದೆಗಳ ಅಧಿಕೃತ ನೇಮಕಾತಿ ಆಯ್ಕೆಯ ಪ್ರಕಟಣೆ 2025ರ ಪ್ರಕಾರ ವೇತನವು ಹುದ್ದೆಗೆ ಅನುಗುಣವಾಗಿ ವಿವಿರಗಳನ್ನು ಈ ಕೆಳಗೆ ವಿವರಿಸಲಾಗಿದೆ.
| ಹುದ್ದೆಯ ಹೆಸರು | ವೇತನ |
| ಸಹಾಯಕ ಆಡಳಿತಾಧಿಕಾರಿ | ರೂ. 42,600-75,010/- ಗಳು |
| ಸಹಾಯಕ ಲೆಕ್ಕಾಧಿಕಾರಿ | ರೂ. 42,600-75,010/- ಗಳು |
| ಸಹಾಯಕ ಕಾನೂನು ಅಧಿಕಾರಿ | ರೂ. 42,600-75,010/- ಗಳು |
| ಸಹಾಯಕ ಕಾರ್ಮಿಕ ಮತ್ತು ಕಲ್ಯಾಣ ಅಧಿಕಾರಿ | ರೂ. 42,600-75,010/- ಗಳು |
| ಸಹಾಯಕ ತಾಂತ್ರಿಕ ಶಿಲ್ಪಿ | ರೂ. 42,600-75,010/- ಗಳು |
| ಸಹಾಯಕ ಸಂಚಾರ ವ್ಯವಸ್ಥಾಪಕ | ರೂ. 42,600-75,010/- ಗಳು |
ಶೈಕ್ಷಣಿಕ ಅರ್ಹತಾ ವಿವರಗಳು:
ವಾಯುವ್ಯ ಕರ್ನಾಟಕ ಸಾರಿಗೆ ಸಂಸ್ಥೆಯಲ್ಲಿ ಸಹಾಯಕ ಸಂಚಾರ ವ್ಯವಸ್ಥಾಪಕ ಹುದ್ದೆಗಳ ಅಧಿಕೃತ ನೇಮಕಾತಿ ಪ್ರಕಾರ ವಿವಿದ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕೆಳಗೆ ತಿಳಿಸಿರುವ ಶೈಕ್ಷಣಿಕ ಅರ್ಹತೆಗಳನ್ನು ಹೊಂದಿರಬೇಕು.
ಸಹಾಯಕ ಆಡಳಿತಾಧಿಕಾರಿ ಹುದ್ದೆಗೆ :
- ಸೋಷಲ್ ವರ್ಕ್ ಅಥವಾ ಪರ್ಸನಲ್ ಮೇನೇಜ್ಮೆಂಟ್ ನಲ್ಲಿ ಐಚ್ಚಿಕ ವಿಷಯವಾಗಿ ಬಿಸಿನೆಸ್ ಅಡ್ಮಿನಿಸ್ಟ್ರೇಷನ್ ಪದವಿ ಅಥವಾ ಕಾನೂನು ರೀತ್ಯಾ ಸ್ಥಾಪಿತವಾದ ವಿಶ್ವವಿದ್ಯಾಲಯದಲ್ಲಿ ಹ್ಯೂಮನ್ ರಿಲೆಷನ್ ನ್ನು ಹೊಂದಿರಬೇಕು.
ಸಹಾಯಕ ಲೆಕ್ಕಾಧಿಕಾರಿ ಹುದ್ದೆಗೆ :
- ಕಾನೂನು ರೀತ್ಯಾ ಸ್ಥಾಪಿತವಾದ ವಿಶ್ವವಿದ್ಯಾಲಯದಲ್ಲಿ ಬಿ. ಕಾಂ. ಜೊತೆಗೆ ಎಮ್. ಬಿ. ಎ. ಪದವಿ ಅಥವಾ ಕಾಮರ್ಸ್ ನಲ್ಲಿ ಮಾಸ್ಟರ್ ಡಿಗ್ರಿಯನ್ನು ಮುಗಿಸಿರುವವರಾಗಿರಬೇಕು.
ಸಹಾಯಕ ಕಾರ್ಮಿಕ ಮತ್ತು ಕಲ್ಯಾಣ ಅಧಿಕಾರಿ ಹುದ್ದೆಗೆ :
- ಕಾನೂನು ರೀತ್ಯಾ ಸ್ಥಾಪಿತವಾದ ವಿಶ್ವವಿದ್ಯಾಲಯದಲ್ಲಿ ಸೋಷಲ್ ವರ್ಕ್ (ಎಮ್. ಎಸ್. ಡಬ್ಲೂ.) ನಲ್ಲಿ ಐಚ್ಚಿಕ ವಿಷಯವಾಗಿ ಇಂಡಸ್ಟ್ರಿಯಲ್ ರಿಲೆಷನ್ಸ್ ನ ಪೋಸ್ಟ್ ಗ್ರ್ಯಾಜುಯೇಶನ್ ಪಡೆದಿರಬೇಕು. ಅಥವಾ ಪರ್ಸನಲ್ ಮೇನೇಜ್ಮೆಂಟ್ ಅಥವಾ ಲೇಬರ್ ವೆಲ್ಫೇರ್ ಪದವಿ ಹೊಂದಿರಬೇಕು.
ಸಹಾಯಕ ಕಾನೂನು ಅಧಿಕಾರಿ ಹುದ್ದೆಗೆ :
- ಕಾನೂನು ರೀತ್ಯಾ ಸ್ಥಾಪಿತವಾದ ವಿಶ್ವವಿದ್ಯಾಲಯದಲ್ಲಿ ಕಾನೂನು ಪದವಿ ಹೊಂದಿರಬೇಕು.
- ಮತ್ತು 2 ವರ್ಷಗಳ ಕಾಲ ವಕೀಲ ರಾಗಿ ಅಭ್ಯಾಸವನ್ನು ಮಾಡಿರಬೇಕು.
ಸಹಾಯಕ ತಾಂತ್ರಿಕ ಶಿಲ್ಪಿ ಹುದ್ದೆಗೆ :
- ಕಾನೂನು ರೀತ್ಯಾ ಸ್ಥಾಪಿತವಾದ ವಿಶ್ವವಿದ್ಯಾಲಯದಲ್ಲಿ ಆಟೋಮೊಬೈಲ್ ಅಥವಾ ಮೆಕಾನಿಕಲ್ ಇಂಜಿನಿಯರಿಂಗ್ ಪದವಿಯನ್ನು ಹೊಂದಿರಬೇಕು.
- ಮತ್ತು ಅಗತ್ಯವಾಗಿ HTV ಡ್ರೈವಿಂಗ್ ಲೈಸೆನ್ಸ್ ಅನ್ನು ಹೊಂದಿರಬೇಕು.
ಸಹಾಯಕ ಸಂಚಾರ ವ್ಯವಸ್ಥಾಪಕ ಹುದ್ದೆಗೆ:
- ಟ್ರಾನ್ಸ್ಪೋರ್ಟ್ ಟೇಷನ್ ನಲ್ಲಿ ಎಮ್. ಬಿ. ಎ. ಸ್ನಾತಕೋತ್ತರ ಪದವಿಯನ್ನು ಹೊಂದಿರಬೇಕು.
- ಅಥವಾ ಮಾರ್ಕೆಟಿಂಗ್ ಅಥವಾ ಪರ್ಸನಲ್ ಮೇನೇಜ್ಮೆಂಟ್ ಮತ್ತು ಇಂಡಸ್ಟ್ರಿಯಲ್ ರಿಲೇಷನ್ಸ್ ನಲ್ಲಿ ಎಮ್ ಎಸ್ ಡಬ್ಲೂ ಅಥವಾ ಬಿ ಇ ನಲ್ಲಿ ಮೆಕಾನಿಕಲ್ ಅಥವಾ ಕಾನೂನು ರೀತ್ಯಾ ಸ್ಥಾಪಿತವಾದ ವಿಶ್ವವಿದ್ಯಾಲಯದಲ್ಲಿ ಆಟೋಮೊಬೈಲ್ ಇಂಜಿನಿಯರಿಂಗ್ ಪದವಿ ಹೊಂದಿರಬೇಕು.
- ಮತ್ತು ಕಡ್ಡಾಯವಾಗಿ ಮಾನ್ಯವಾದ HTV ಡ್ರೈವಿಂಗ್ ಲೈಸೆನ್ಸ್ ಅನ್ನು ಹೊಂದಿರಬೇಕು
ವಯಸ್ಸಿನ ಪರಿಮಿತಿ:
ವಾಯುವ್ಯ ಕರ್ನಾಟಕ ಸಾರಿಗೆ ಸಂಸ್ಥೆಯಲ್ಲಿ ಸಹಾಯಕ ಸಂಚಾರ ವ್ಯವಸ್ಥಾಪಕ ಹುದ್ದೆಗಳ ಅಧಿಕೃತ ನೇಮಕಾತಿ ಪ್ರಕಾರ ವಿವಿದ ಹುದ್ದೆಗಳಿಗೆ ಅರ್ಜಿಸಲ್ಲಿಸುವ ಅಭ್ಯರ್ಥಿಗಳು 10-ಡಿಸೆಂಬರ್-2025ಕ್ಕೆ ಅರ್ಜಿ ಸಲ್ಲಿಸುವ ಎಲ್ಲಾ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಹಾಗೂ ಗರಿಷ್ಠ ವಯಸ್ಸು ವರ್ಗದ ಪ್ರಕಾರ ಈ ಕೆಳಗಿನಂತಿವೆ.
- ಪ.ಜಾ/ಪ.ಪಂ/ಪ್ರವರ್ಗ-1ಕ್ಕೆ ಸೇರಿರುವ ಅಭ್ಯರ್ಥಿಗಳಿಗೆ – ಕನಿಷ್ಠ 18 ವರ್ಷಗಳಿಂದ ಗರಿಷ್ಟ 43 ವರ್ಷ ಮೀರಿರಬಾರದು.
- ಒ.ಬಿ.ಸಿ.(IIA, IIB, IIIA, IIIB) ವರ್ಗದ ಅಭ್ಯರ್ಥಿಗಳಿಗೆ – ಕನಿಷ್ಠ 18 ವರ್ಷಗಳಿಂದ ಗರಿಷ್ಟ 41 ವರ್ಷ ಮೀರಿರಬಾರದು.
- ಸಾಮನ್ಯ ವರ್ಗದ ಅಭ್ಯರ್ಥಿಗಳಿಗೆ – ಕನಿಷ್ಠ 18 ವರ್ಷಗಳಿಂದ ಗರಿಷ್ಟ 38 ವರ್ಷ ಮೀರಿರಬಾರದು.
ಅರ್ಜಿ ಶುಲ್ಕದ ವಿವರಗಳು:
- ಸಾಮನ್ಯ ವರ್ಗ, ಒ.ಬಿ.ಸಿ.(IIA, IIB, IIIA, IIIB) ವರ್ಗದ ಅಭ್ಯರ್ಥಿಗಳಿಗೆ – ಅರ್ಜಿ ಶುಲ್ಕ ರೂ. 750/- ಗಳು
- ಪ.ಜಾ/ಪ.ಪಂ/ಪ್ರವರ್ಗ-1ಕ್ಕೆ ಸೇರಿರುವ ಅಭ್ಯರ್ಥಿಗಳಿಗೆ – ಅರ್ಜಿ ಶುಲ್ಕ ರೂ. 500/- ಗಳು
- ವಿಶೇಷ ಚೇತನ ಅಭ್ಯರ್ಥಿಗಳು ಮತ್ತು ತೃತೀಯ ಲಿಂಗಿಗಳು – ಅರ್ಜಿ ಶುಲ್ಕ ರೂ. 250/- ಗಳು
ನೋಟ್ : ಅರ್ಜಿ ಶುಲ್ಕವನ್ನು ಹಿಂದಿರುಗಿಸಲಾಗುವುದಿಲ್ಲ.
ದೇಹದಾರ್ಡ್ಯತೆ :
ವಾಯುವ್ಯ ಕರ್ನಾಟಕ ಸಾರಿಗೆ ಸಂಸ್ಥೆಯಲ್ಲಿ ಸಹಾಯಕ ಸಂಚಾರ ವ್ಯವಸ್ಥಾಪಕ ಹುದ್ದೆಗಳ ಅಧಿಕೃತ ನೇಮಕಾತಿ ಆಯ್ಕೆಯ ಪ್ರಕಟಣೆ 2025ರ ಪ್ರಕಾರ ಈ ಕೆಳಗೆ ಕೊಡಲಾದ ಕನಿಷ್ಠ ದೇಹದಾರ್ಡ್ಯತೆ ಹೊಂದಿರಬೇಕು.
- ಪುರುಷರು – ಎತ್ತರ 163 ಸೆಂ. ಮೀ. ತೂಕ 55 ಕೆ,ಜಿ
- ಮಹಿಳೆಯರು – ಎತ್ತರ 153 ಸೆಂ. ಮೀ. ತೂಕ 50 ಕೆ,ಜಿ
ನೇಮಕಾತಿಯ ಆಯ್ಕೆಯ ವಿಧಾನ:
- ಕನ್ನಡ ಭಾಷಾ ಪರೀಕ್ಷೆ (ಅನ್ವಯವಾಗಿದ್ದಾರೆ)
- ಸ್ಪರ್ಧಾತ್ಮಕ ಲಿಖಿತ ಪರೀಕ್ಷೆ
- ಕೊನೆಯದಾಗಿ ಆಯ್ಕೆ ಪ್ರಕ್ರಿಯೆ ಮತ್ತು ನೇಮಕಾತಿ
KEA JOBS 2025 ಅರ್ಜಿ ಸಲ್ಲಿಸುವ ವಿಧಾನಗಳು ಕೆಳಗಿನಂತಿವೆ
- ಅರ್ಜಿ ಸಲ್ಲಿಸುವ ಮೊದಲು ವಾಯುವ್ಯ ಕರ್ನಾಟಕ ಸಾರಿಗೆ ಸಂಸ್ಥೆಯಲ್ಲಿ ಸಹಾಯಕ ಸಂಚಾರ ವ್ಯವಸ್ಥಾಪಕ ಹುದ್ದೆಗಳ ಅಧಿಕೃತ ನೇಮಕಾತಿ 2025 ಅಧಿಕೃತ ಪ್ರಕಟಣೆಯನ್ನು ಪೂರ್ಣವಾಗಿ ಓದಿ ಮತ್ತು ಅದಕ್ಕೆ ಅರ್ಹರಲ್ಲಿ ಅರ್ಜಿ ಸಲ್ಲಿಸಿ.
- https://cetonline.karnataka.gov.in/kea ವೆಬ್ ಸೈಟ್‌ಗೆ ಭೇಟಿ ನೀಡಿ.
- ಮೊದಲನೆಯದಾಗಿ ಅಭ್ಯರ್ಥಿಗಳು ನಿಮ್ಮ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆ ಯನ್ನು ನೋಂದಾಯಿಸಿಕೊಳ್ಳಿ.
- ನಂತರದಲ್ಲಿ ನಿಗದಿತ ನಮೂನೆಯಲ್ಲಿ ಸರಿಯಾಗಿ ಭರ್ತಿ ಮಾಡಿ ಮತ್ತು ಆಯಾ ಹುದ್ದೆಗಳಿಗೆ ನಿಗಡಿಪಡಿಸಿರುವ ವಿದ್ಯಾರ್ಹತೆಯ ಎಲ್ಲ ವಿಷಯಗಳ ಸೆಮಿಸ್ಟರ್ ಗಳ ಅಂಕಪಟ್ಟಿಗಳನ್ನು ಮತ್ತು ಘಟಿಕೋತ್ಸವ ಪ್ರಮಾಣ ಪತ್ರ (ಹೆಸರು, ಜನ್ಮ ದಿನಾಂಕ, ವಿದ್ಯಾರ್ಹತೆ ಇನ್ನೂ ಮುಂತಾದ ವಿವಿರಗಳೊಂದಿಗೆ)
- ಇತ್ತೀಚಿನ ಭಾವಚಿತ್ರ JPEG ಫಾರ್ಮಾಟ್ ನಲ್ಲಿ 50KB ಇಂದ 200KB ಸೈಜಿನ ಇರುವ ಹಾಗೆ ಫೋಟೋ ವನ್ನು ಸ್ಕ್ಯಾನ್ ಮಾಡಬೇಕು. ಮತ್ತು ಸಹಿಯನ್ನು JPEG ಫಾರ್ಮಾಟ್ ನಲ್ಲಿ 50KB ಇಂದ 70KB ಇರುವ ಹಾಗೆ ಸಹಿಯನ್ನು ಅಪ್ಲೋಡ್ ಮಾಡಿಕೊಳ್ಳಿ.
- ಅರ್ಜಿ ಶುಲ್ಕವನ್ನು ಪಾವತಿಸಿ
ಅರ್ಜಿ ಶುಲ್ಕವನ್ನು ಆನ್ಲೈನ್ ಮುಖಾಂತರ ಮಾತ್ರ ಪಾವತಿ ಮಾಡಬೇಕು. ಡೆಬಿಟ್ ಕಾರ್ಡ್ ಅಥವಾ ಕ್ರೆಡಿಟ್ ಕಾರ್ಡ್, ಇಂಟರ್ನೆಟ್ ಬ್ಯಾಂಕಿಂಗ್, ಐಎಮ್ ಪಿಎಸ್, ಯುಪಿಐ, ಮೊಬೈಲ್ ವ್ಯಾಲೇಟ್ ಗಳು, ನಗದು ಕಾರ್ಡ್ ಇದರಲ್ಲಿ ಯಾವುದಾದರೊಂದು ಬಳಸಿ ಅರ್ಜಿ ಶುಲ್ಕವನ್ನು ಪಾವತಿಸಬೇಕು.
ನೋಟ್ : ಅರ್ಜಿ ಶುಲ್ಕವನ್ನು ಯಾವುದೇ ಕಾರಣಕ್ಕೂ ಹಿಂದಿರಿಗಿಸುವುದಿಲ್ಲ ಮತ್ತು ಮುಂದಿನ ಯಾವುದೇ ಪರೀಕ್ಷೆಗೆ ಪರಿಗಣನೆಗೆ ತೆಗೆದುಕೊಳ್ಳುವುದಿಲ್ಲ.
- ನಂತರ ಭವಿಷ್ಯದ ಉಲ್ಲೇಖಕ್ಕಾಗಿ ಓಂದು ಪ್ರತಿಯ ಪ್ರಿಂಟ್ ಔಟ್ ನ್ನು ನಿಮ್ಮ ಬಳಿ ಇಟ್ಟುಕೊಳ್ಳಿ ಸಂಸ್ಥೆಯವರು ಅಪೇಕ್ಷಿಸಿದಾಗ ಹಾಜರುಪಡಿಸಬೇಕಾಗುತ್ತದೆ.
ಪ್ರಮುಖ ದಿನಾಂಕ ಮತ್ತು ಲಿಂಕ್ ಗಳ ಮಾಹಿತಿ
| ಅರ್ಜಿ ಸಲ್ಲಿಸಬೇಕಾದ ಆರಂಭದ ದಿನಾಂಕ | 🗓️ 21-11-2025 |
| ಅರ್ಜಿ ಸಲ್ಲಿಸಬೇಕಾದ ಕೊನೆಯ ದಿನಾಂಕ | 🗓️ 10-12-2025 |
| ಉದ್ಯೋಗದ ನೇಮಕಾತಿಗಾಗಿ ಅಧಿಸೂಚನೆಗಾಗಿ | 👉🏻 ಇಲ್ಲಿ ಕ್ಲಿಕ್ ಮಾಡಿ |
| ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಲು | 👉🏻 ಇಲ್ಲಿ ಕ್ಲಿಕ್ ಮಾಡಿ |
| ನೇಮಕಾತಿ ವೆಬ್ಸೈಟ್ ವಿಳಾಸ : https://cetonline.karnataka. gov.in/kea | |

FAQಗಳು ಪದೇ ಪದೇ ಕೇಳಲಾಗುವ ಪ್ರಶ್ನೆಗಳು
ಕೆಳಗೆ `ವಾಯುವ್ಯ ಕರ್ನಾಟಕ ಸಾರಿಗೆ ಸಂಸ್ಥೆಯಲ್ಲಿ ಸಹಾಯಕ ಸಂಚಾರ ವ್ಯವಸ್ಥಾಪಕ ಹುದ್ದೆಗಳ‘ ನೇಮಕಾತಿ 2025ರಲ್ಲಿ ವಿವಿಧ ಹುದ್ದೆಗಳ ನೇಮಕಾತಿ ಕುರಿತು ಕೆಲವು ಸಾಮಾನ್ಯ ಪ್ರಶ್ನೆಗಳಿಗೆ ಉತ್ತರಗಳನ್ನು ನೀಡಲಾಗಿದೆ.
ಪ್ರಶ್ನೆ 1 : `ವಾಯುವ್ಯ ಕರ್ನಾಟಕ ಸಾರಿಗೆ ಸಂಸ್ಥೆಯಲ್ಲಿ ಸಹಾಯಕ ಸಂಚಾರ ವ್ಯವಸ್ಥಾಪಕ ಹುದ್ದೆಗಳ‘ನೇಮಕಾತಿ ಅರ್ಜಿ ಸಲ್ಲಿಕೆ ಕೊನೆ ದಿನ ಯಾವುದು?
ಉತ್ತರ 1 : ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು 10-ಡಿಸೆಂಬರ್-2025-ನವೆಂಬರ್-2025 ಕೊನೆಯ ದಿನಾಂಕವಾಗಿದೆ.
ಪ್ರಶ್ನೆ 2 : ಒಟ್ಟು ಎಷ್ಟು ಹುದ್ದೆಗಳಿವೆ?
ಉತ್ತರ 2 : ಒಟ್ಟು 23 ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಪ್ರಶ್ನೆ 3: ಅರ್ಜಿ ಸಲ್ಲಿಸಲು ಬೇಕಾಗಿರುವ ವಿದ್ಯಾರ್ಹತೆ ಏನು?
ಉತ್ತರ 3: ಅರ್ಜಿ ಸಲ್ಲಿಸುವ ಆರ್ಭ್ಯಥಿಗಳು ಪದವಿ, ಸ್ನಾತಕೋತ್ತರ ಪದವಿ ಇನ್ನೂ ಮುಂತಾದ ವಿದ್ಯಾರ್ಹತೆಯನ್ನು ಹೊಂದಿರಬೇಕು.

